
ಸನಾವುಲ್ಲಾ ಮನೆ
ಬೆಂಗಳೂರು: ನಮ್ಮ ಜೀವಕ್ಕೆ ಯಾವುದೇ ಬೆಲೆ ಇಲ್ಲ ಎಂದು ತಾಂಜೇನಿಯಾದ ವಿದ್ಯಾರ್ಥಿನಿ ಮೇಲಿನ ಹಲ್ಲೆ ಕಾರಣವಾದ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಪತಿ ಬೇಸರ ವ್ಯಕ್ತಪಡಿಸಿದ್ದಾರೆ.
ಒಂದು ಕಡೆ ಅಪಘಾತದ ಬಳಿಕ ತಾಂಜೇನಿಯಾದ ವಿದ್ಯಾರ್ಥಿನಿ ಹಲ್ಲೆ ನಡೆಸಿದ ಪ್ರಕರಣ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೆ, ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಅಪಘಾತದ ಸ್ಥಳಕ್ಕೆ ಕನಿಷ್ಠ ಪಕ್ಷ ಹಿರಿಯ. ಪೊಲೀಸ್ ಅಧಿಕಾರಿಗಳು ಸಹ ಬರಲಿಲ್ಲ ಎಂದು ಮೃತಪಟ್ಟ ಮಹಿಳೆಯ ಪತಿ ಸನಾವುಲ್ಲಾ ಅವರು ಹೇಳಿದ್ದಾರೆ.
ಅಪಘಾತದ ನಂತರ ಯುವತಿ ಮೇಲೆ ಹಲ್ಲೆ ನಡೆಸಿದ ಆಕ್ರೋಶಗೊಂಡ ಜನರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಯೊಬ್ಬರು ಒತ್ತಾಯಿಸುತ್ತಿದ್ದಾರೆ. ಆದರೆ ನಮ್ಮ ಜೀವಕ್ಕೆ ಯಾವುದೇ ಬೆಲೆ ಇಲ್ಲವೇ ಎಂದು ಅಪಘಾತದಲ್ಲಿ ಗಾಯಗೊಂಡು ಪ್ರಾಣಪಯಾದಿಂದ ಪಾರಾಗಿರುವ ಮಹಿಳೆಯ ಪತಿ ಪ್ರಶ್ನಿಸಿದ್ದಾರೆ.
ಕಳೆದ ಭಾನುವಾರ ಮದ್ಯ ಸೇವಿಸಿದ್ದ ಸೂಡಾನ್ ವಿದ್ಯಾರ್ಥಿ ಮೊಹಮದ್ ಅಹದ್ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಸನಾವುಲ್ಲಾ ಅವರ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಅವರ ಪತ್ನಿ ಶಬಾನಾ ತಾಜ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಜನ ಕಾರಿನಲ್ಲಿದ್ದ ತಾಂಜೇನಿಯಾದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆ ನಂತರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಗೃಹ ಇಲಾಖೆ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಹೀಗಾಗಿ ಘಟನೆ ರಾಜ್ಯ ಮಾತ್ರವಲ್ಲದೆ ದೇಶದ ಗಮನ ಸೆಳೆದಿತ್ತು.