ಕರ್ನಾಟಕ

ತಾಂಜಾನಿಯಾ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣ: ನಾಲ್ವರ ಬಂಧನ, ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

Pinterest LinkedIn Tumblr

arrested1ಬೆಂಗಳೂರು: ತಾಂಜಾನಿಯಾ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಿದ್ದು, ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪ್ರಕರಣ ಸಂಬಂಧ ಗುರುವಾರ ರಾತ್ರಿ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈವರೆಗೆ ಒಟ್ಟು ಒಂಬತ್ತು ಮಂದಿ ಬಂಧಿಸಿದಂತಾಗಿದೆ. ಇನ್‌ಸ್ಟೆಕ್ಟರ್‌ ಪ್ರವೀಣ್‌ ಬಾಬು ಮತ್ತು ಕಾನ್‌ಸ್ಟೆಬಲ್ ಮಂಜುನಾಥ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಎನ್‌.ಎಸ್‌. ಮೇಘರಿಕ್‌ ಶುಕ್ರವಾರ ತಿಳಿಸಿದರು.

ಕರ್ತವ್ಯ ಲೋಪ ಎಸಗಿರುವುದರಿಂದ ಇನ್‌ಸ್ಪೆಕ್ಟರ್ ಪ್ರವೀಣ್‌ ಬಾಬು ಅವರನ್ನು ಹಾಗೂ ಘಟನಾ ಸ್ಥಳದಲ್ಲಿದ್ದು ಕ್ರಮ ಕೈಗೊಳ್ಳದೇ ಇದ್ದುದರಿಂದ ಕಾನ್‌ಸ್ಟೆಬಲ್ ಮಂಜುನಾಥ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮಹಿಳೆ ಮೇಲೆ ದಾಳಿ ನಡೆಸಿರುವ ಹಾಗೂ ಕಾನೂನು ಬಾಹಿರವಾಗಿ ಗುಂಪು ಸೇರಿದ್ದ, ಗಲಭೆ ಮತ್ತು ಮಹಿಳೆಯ ನಮ್ರತೆಗೆ ಧಕ್ಕೆ ತಂದಿರುವ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಘಟನೆ: ಜ.31ರ ರಾತ್ರಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿ ನಡೆದ ಅಪಘಾತದ ಸ್ಥಳವನ್ನು ಹಾದು ಹೋದ ತಾಂಜಾನಿಯಾ ವಿದ್ಯಾರ್ಥಿನಿಯ ಬಟ್ಟೆಬಿಚ್ಚಿ ನಗ್ನಗೊಳಿಸಿ ದೌರ್ಜನ್ಯ ನಡೆಸಲಾಗಿತ್ತು.

Write A Comment