ಹುಬ್ಬಳ್ಳಿ, ಫೆ.9- ರೈಲ್ವೇ ನಿಲ್ದಾಣದ ಹಳೇ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿದ್ದು , ಅವಶೇಷದಡಿ ಇನ್ನ್ಯಾರೂ ಸಿಲುಕಿಲ್ಲ ಎಂಬುದನ್ನು ಖಚಿತಪಡಿಸಿ ಕೊಂಡು ಕಾರ್ಯಾಚರಣೆಯನ್ನು ಇಂದು ಬೆಳಗ್ಗೆ ಅಂತ್ಯಗೊಳಿಸಲಾಗಿತ್ತು. ತಡರಾತ್ರಿವರೆಗೂ ಒಳಗೆ ಸಿಲುಕಿದವರ ಬಗ್ಗೆ ಹುಡುಕಾಟ ನಡೆದಿತ್ತು. ಇಂದು ಬೆಳಗ್ಗೆ ಮತ್ತೆ 8 ಗಂಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ತುರ್ತು ನಿರ್ವಹಣಾ ಪಡೆಯ ಸಿಬ್ಬಂದಿಗಳು ಒಳಗೆ ತಾಯಿ ಹಾಗೂ ಮಗು ಸಿಕ್ಕಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಬೆಳಗ್ಗೆ 11 ಗಂಟೆ ವೇಳೆಗೆ ಅವಶೇಷಗಳಡಿ ಯಾರೂ ಸಿಲುಕಿಲ್ಲವೆಂಬುದನ್ನು ಖಚಿತಪಡಿಸಿಕೊಳ್ಳಲಾಯಿತು.
ಇದರ ನಡುವೆ ಗಾಯಾಳುಗಳು ರೈಲ್ವೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ಈ ವೇಳೆ ಮೃತರಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂದು ರೈಲ್ವೆ ಸಲಹಾ ಸಮಿತಿ ಸದಸ್ಯ ಮಹೇಂದ್ರಸಿಂಘಿ ತಿಳಿಸಿದ್ದಾರೆ. ಇದಲ್ಲದೆ ಮೃತರ ಕುಟುಂಬ ಸದಸ್ಯರಿಗೆ ನೌಕರಿ ಕೊಡಬೇಕು, ಜುರಂತಕ್ಕೆ ಕಾರಣರಾದ ರೈಲ್ವೆ ಜಿಎಂ ಮತ್ತಿತರ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಿ ತನಿಖೆ ನಡೆಸಬೇಕೆಂದು ಮಹೇಂದ್ರಸಿಂಘಿ ಒತ್ತಾಯಿಸಿದ್ದಾರೆ.
ತಲಾ ಎರಡು ಲಕ್ಷ ರೂ.ಗಳ ಪರಿಹಾರ :
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿದ ಘಟನೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿಗಳು. ಮೃತರ ಕುಟುಂಬದವರಿಗೆ ಸಾಂತ್ವನ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ.ಗಳ ಪರಿಹಾರ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ. ಮುಖ್ಯಮಂತ್ರಿಗಳಿಂದ ಘೋಷಣೆ