ಸಿಡ್ನಿ (ಪಿಟಿಐ): ಭಾರತೀಯ ಮೂಲದ ಹರಿಂದರ್ ಸಿಧು ಅವರು ಭಾರತದಲ್ಲಿ ಆಸ್ಟ್ರೇಲಿಯಾದ ನೂತನ ಹೈಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ಪ್ಯಾಟ್ರಿಕ್ ಸಕ್ಲಿಂಗ್ ಭಾರತದಲ್ಲಿ ಆಸ್ಟ್ರೇಲಿಯಾದ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸ್ಥಾನಕ್ಕೆ ಹರಿಂದರ್ ಸಿಧು ಅವರನ್ನು ನೇಮಕ ಮಾಡಲಾಗಿದೆ.
ಭಾರತೀಯ ಮೂಲದ ಹರಿಂದರ್ ಸಿಧು ಕುಟುಂಬ ಆಸ್ಟ್ರೇಲಿಯಾದಲ್ಲಿ ನೆಲೆಸಿದೆ. ಸಿಧು ಅವರು ಸಿಡ್ನಿ ವಿಶ್ವವಿದ್ಯಾಲಯದಲ್ಲಿ ಕಾನೂನು ಮತ್ತು ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ.
ಸಿಧು ಅವರು ಆಸ್ಟ್ರೇಲಿಯಾದ ವಿದೇಶಾಂಗ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ಆಸ್ಟ್ರೇಲಿಯಾದ 5 ಲಕ್ಷ ಜನ ಭಾರತೀಯರು ನೆಲೆಸಿದ್ದು, ಇಲ್ಲಿನ ವಿವಿಧ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ.