ಬೆಂಗಳೂರು,ಫೆ.17- ಶಾಲಾ ಬಾಲಕಿಯೋರ್ವಳ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯವೆಸಗಿರುವ ಹೀನ ಕೃತ್ಯ ಜಾಲಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ
ಜಾಲಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ವೆಸಗಿದ್ದು ಆತನನ್ನು ಬಂಧಿಸಿರುವ ಜಾಲಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಾಲೆಯ ಆವರಣದಲ್ಲೇ ಶಿಕ್ಷಕ ಬಾಲಕಿ ಮೇಲೆ ದೈಹಿಕ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೆÇೀಷಕರು ಆರೋಪಿಸಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.