ರಾಷ್ಟ್ರೀಯ

ಗುಜರಾತ್ ನ ಗ್ರಾಮವೊಂದರಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಬಳಕೆ ನಿಷೇಧ!

Pinterest LinkedIn Tumblr

mobile

ಅಹಮದಾಬಾದ್: ಗುಜರಾತ್ ನ ಮೆಹಸಾನಾ ಜಿಲ್ಲೆಯ ಸೂರಜ್ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಮೊಬೈಲ್ ಬಳಕೆ ಮಾಡುವುದು ಅಥವಾ ಮೊಬೈಲ್ ಖರೀದಿಸುವುದನ್ನು ನಿಷೇಧಿಸಲಾಗಿದೆ.

ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿನಿಯರ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವ ಕಾರಣ ನೀಡಿ ಸೂರಜ್ ಗ್ರಾಮಪಂಚಾಯತ್ ನ ಮುಖ್ಯಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ. ಆದೇಶ ಮೀರಿ ಮೊಬೈಲ್ ಬಳಕೆ ಮಾಡುವವರಿಗೆ 2 ,100 ರೂ ದಂಡ ವಿಧಿಸಲಾಗುತ್ತದೆ ಎಂದು ಗ್ರಾಮದ ಮುಖ್ಯಸ್ಥರು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಬಳಕೆ ನಿಷೇಧಿಸುವುದು ಒಮ್ಮತದ ತೀರ್ಮಾನವಾಗಿದ್ದು, ಅತಿಯಾದ ಮೊಬೈಲ್ ಬಳಕೆ ವಿದ್ಯಾರ್ಥಿನಿಯರ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಅಭಿಪ್ರಾಯ ಕೇಳಿಬಂದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

18 ವರ್ಷಕ್ಕಿಂತ ಕಿರಿಯ ವಿದ್ಯಾರ್ಥಿನಿಯರಿಗೆ ಮಾತ್ರ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಕಾಲೇಜು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಮೊಬೈಲ್ ಬಳಕೆ ಮಾಡಲು ಅನುಮತಿ ನೀಡಲಾಗಿದೆ. ಕಾಲೇಜು ವಿದ್ಯಾರ್ಥಿನಿಯರಿಗೆ ಸರಿ ತಪ್ಪುಗಳನ್ನು ನಿರ್ಧರಿಸುವ ವಿವೇಚನೆ ಇರುತ್ತದೆ. ಅಲ್ಲದೇ ಕಾಲೇಜಿನಲ್ಲಿ ಕಲಿಯಲು ಗ್ರಾಮದಿಂದ ನಗರ ಪ್ರದೇಶಕ್ಕೆ ಹೋಗಬೇಕಾಗುತ್ತದೆ ಆದ್ದರಿಂದ ಪೋಷಕರೊಂದಿಗೆ ಸಂಪರ್ಕದಲ್ಲಿರಲು ವಿದ್ಯಾರ್ಥಿನಿಯರಿಗೆ ಮೊಬೈಲ್ ಅಗತ್ಯವಾಗಿರುತ್ತದೆ. ಆದ್ದರಿಂದ ಕಾಲೇಜು ವಿದ್ಯಾರ್ಥಿನಿಯರಿಗೆ ಮೊಬೈಲ್ ನಿಷೇಧಿಸಲಾಗಿಲ್ಲ ಎಂದು ಸೂರಜ್ ಗ್ರಾಮಪಂಚಾಯತ್ ಮುಖಂಡರು ಹೇಳಿದ್ದಾರೆ.

Write A Comment