
ದಾವಣಗೆರೆ: ಇನ್ನೋವಾ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹರಿಹರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ನಡೆದಿದೆ. ಶಿವಮೊಗ್ಗದಿಂದ ಹರಿಹರಕ್ಕೆ ಬರುವಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಹರಿಹರದ ವಿನೋದ್ ಬಾಂಬೆಕಾರ್, ಹೂವಿನಹಡಗಲಿಯ ಗಿರೀಶ್, ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದ್ದು, ಪ್ರಶಾಂತ್ ಮತ್ತು ಜೈಪ್ರಕಾಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಕಳೆದ ೩ ದಿನಗಳ ಹಿಂದೆಯಷ್ಟೇ ಖರೀದಿಸಿದ್ದ ಇನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವುಇನೋವಾ ಕಾರಿನಲ್ಲಿ ಒಟ್ಟು ಐವರು ಸ್ನೇಹಿತನ ಮದುವೆಗೆಂದು ಶಿವಮೊಗ್ಗಕ್ಕೆ ತೆರಳಿ ವಾಪಾಸಾಗುತ್ತಿದ್ದರು ಎನ್ನಲಾಗಿದೆ. ವಿನೋದ್ ಕಾರು ಚಾಲನೆ ಮಾಡುತ್ತಿದ್ದ. ಮುಂಜಾನೆ 3.30ರ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ ವಾಹನ ನಂತರ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ಹರಿಹರ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಕೆಲವರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ.