
ಮಂಗಳೂರು,ಮಾ.19 : ನಗರದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಉಪಮೇಯರ್ರಾಗಿ ಆಯ್ಕೆಯಾದ ಕು|ಸುಮಿತ್ರ ಕರಿಯ ಇವರನ್ನು ಶುಕ್ರವಾರ ಅಭಿನಂದಿಸಲಾಯಿತು.
ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್ ಸಿಂಹ ನಾಯಕ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಸಂಜೀವ ಮಠಂದೂರು, ಕಿಶೋರ್ ರೈ, ಶೈಲಜಾ ಕೆ.ಟಿ.ಭಟ್ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.