ಕರ್ನಾಟಕ

ಜಾತ್ರೆಗೆ ಬಂದಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರ ಬಂಧನ

Pinterest LinkedIn Tumblr

rape

ದಾವಣಗೆರೆ: ಜಾತ್ರೆಗೆ ಬಂದಿದ್ದ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರಪ್ಪನಹಳ್ಳಿಯ ಕೂಲಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಹೀರೇ ಹಡಗಲಿಯ ಹನುಮಂತಪ್ಪ , ಬಸವರಾಜು, ಯಾನು, ಬಸವರಾಜ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಹರಪ್ಪನಹಳ್ಳಿಯಲ್ಲಿ ನಡೆದಿದ್ದ ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸುಮಾರು 30 ವರ್ಷದ ಮಹಿಳೆಯನ್ನು ಅಪಹರಿಸಿ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು ಎಂದು ಹೇಳಲಾಗಿದೆ.

ಘಟನೆ ನಡೆದ ನಂತರ ಸಂತ್ರಸ್ತ ಮಹಿಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ನಡೆದ ಪೈಶಾಚಿಕ ಕೃತ್ಯದ ಬಗ್ಗೆ ತಿಳಿಸಿದ್ದಾಳೆ. ತಕ್ಷಣ ಎಚ್ಚೆತ್ತುಕೊಂಡ ಖಾಕಿ ಪಡೆ ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಕಾಮುಕರ ಬೇಟೆಗೆ ಕಾರ್ಯಾಚರಣೆ ಆರಂಭಿಸಿತು. ಆರೋಪಿಗಳು ಸಿಕ್ಕಿ ಬಿದ್ದರು ಎಂದು ಹೇಳಲಾಗಿದೆ. ಹರಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರೆದಿದೆ.

Write A Comment