ಕುಂದಾಪುರ: ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಕುಟುಂಬ ಸಮೇತರಾಗಿ ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಶೀ ಮೂಕಾಂಬಿಕೆ ದೇವಸ್ಥಾನ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಾಗೂ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಯಾವುದೇ ಪೂರ್ವಮಾಹಿತಿಯಿಲ್ಲದೇ ಭಾನುವಾರ ರಾತ್ರಿ ಕೊಲ್ಲೂರಿಗೆ ಆಗಮಿಸಿದ್ದ ಅವರು ಮುಂಜಾನೆ ಶ್ರೀ ಮೂಕಾಂಬಿಕ ದೇವಸ್ಥಾನದಲ್ಲಿ ಚಂಡಿಕಾ ಯಾಗ ನೆರವೇರಿಸಿದರು ಬಳಿಕ ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ಎಂ. ಸುಕುಮಾರ್ ಶೆಟ್ಟಿ ಅವರ ಜೊತೆಗೆ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳಿಗ್ಗೆ 10 ಗಂಟೆ ಸುಮಾರಿಗೆ ಕುಂದಾಪುರದ ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು. 11 ಗಂಟೆ ಸುಮಾರಿಗೆ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿ ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
11.45ರ ಸುಮರಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು ದೇವಸ್ಥಾನದ ವತಿಯಿಂದ ದೇವಳದ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯ ಆದರದಿಂದ ಭರಮಾಡಿಕೊಂಡು ಗೌರವಿಸಿದರು.
ದೇವಸ್ಥಾನಗಳ ಭೇಟಿ ಸಂದರ್ಭ ಡಿ.ವಿ. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ, ಪುತ್ರ ಕಾರ್ತಿಕ್ ಗೌಡ, ಸೊಸೆ ರಾಜಶ್ರೀ ಜೊತೆಗಿದ್ದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕುಂದಾಪುರ ಕ್ಷೇತ್ರಾಧ್ಯಕ್ಷ ರಾಜೇಶ್ ಕಾವೇರಿ, ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕ್ರಷ್ಣಪ್ರಸಾದ್ ಅಡ್ಯಂತಾಯ, ಕುಂಭಾಸಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀವಾಣಿ ಅಡಿಗ ಮೊದಲಾದವರು ಉಪಸ್ಥಿತರಿದ್ದರು.