ಕರ್ನಾಟಕ

ಕಲಬುರ್ಗಿ ಜಿಲ್ಲಾ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ, ತಪ್ಪಿದ ಭಾರೀ ಅನಾಹುತ

Pinterest LinkedIn Tumblr

gul

ಕಲಬುರಗಿ: ಕಲಬುರ್ಗಿ ಜಿಲ್ಲಾ ಆಸ್ಪತ್ರೆಯ ನವಜಾತ ಶಿಶುಗಳ ತುರ್ತು ನಿಗಾ ಘಟಕದಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲಾ ಶಿಶುಗಳು ಪ್ರಾಣಾಪಾಯದಿಂದ ಪಾರಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದ ವೆಂಟಿಲೇಟರ್ ಗಳಲ್ಲಿ ಸೋರಿಯಾಗಿ ಎಸಿ ಸ್ಫೋಟಗೊಂಡಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

ತುರ್ತು ನಿಗಾ ಘಟಕದಲ್ಲಿ 26ಕ್ಕೂ ಹೆಚ್ಚು ಶಿಶುಗಳಿದ್ದವು ಎನ್ನಲಾಗಿದ್ದು, ಆಸ್ಪತ್ರೆ ಸಿಬ್ಬಂದಿ ಕೂಡಲೇ ಆ ಎಲ್ಲಾ ಶಿಶುಗಳನ್ನು ಬೇರೆ ವಾರ್ಡ್ ಗೆ ಸ್ಥಳಾಂತರಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹಾಗೂ ಈಶಾನ್ಯ ವಲಯ ಐಜಿಪಿ ಬಿ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Write A Comment