ದೆಹಲಿ: ಕಾಂಗ್ರೆಸ್ ಬಂಡಾಯದಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವ ಮೂಲಕ ರಾಮ್ ದೇವ್ ಅವರು ಉತ್ತರಾಖಂಡದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಯೋಗಗುರು ಬಾಬಾ ರಾಮದೇವ್ ಅವರು ಕಾರಣ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯೋಗ ಗುರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿ, ನಾನು ಏನೇ ಮಾಡಿದರು, ಹೇಳಿದರೂ ಅದನ್ನು ಬಹಿರಂಗವಾಗಿ ಮಾಡುತ್ತೇನೆ. ರಾಜಯಕೀಯ ನನ್ನ ಆಸಕ್ತಿಯಲ್ಲ. ಸೋನಿಯಾ ಹಾಗೂ ರಾಹುಲ್ ಗಾಂಧಿ ತಮ್ಮ ತಮ್ಮ ಕೆಲಸಗಳ ಬಗ್ಗೆ ಗಮನ ಹರಿಸಲಿ ಎಂದಿದ್ದಾರೆ.
ಉತ್ತರಾಖಂಡದಲ್ಲಿ ಹರೀಶ್ ರಾವತ್ ಸರ್ಕಾರ ಉರುಳಿಸಲು ರಾಮದೇವ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಂಚು ರೂಪಿಸಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.