
ಬೆಂಗಳೂರು: ಸಂಪುಟ ಪುನಾರಚನೆ ಕುರಿತು ಹೆಕಮಾಂಡ್ ನೊಂದಿಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್ 14ರ ರಾತ್ರಿ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಸಂಪುಟ ಪುನಾರಚನೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಯನಿರ್ವಹಿಸದ ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಸಂಪುಟ ಪುನಾರಚನೆ ಮಾಡಬೇಕು ಎಂದು ಕೆಲ ಶಾಸಕರು ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೈಕಮಾಂಡ್ ನ ಭೇಟಿ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್ 15ರಂದು ಸೋನಿಯಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದು ಸಂಪುಟ ಪುನಾರಚನೆ ಚರ್ಚೆ ನಡೆಸಲಿದ್ದಾರೆ.
ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಸೇರಿದಂತೆ 24 ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಆರ್ ವಿ ದೇವರಾಜ್, ಕೆಎನ್ ರಾಜಣ್ಣ, ಭ್ಯಾರ್ಥಿ ಬಸವರಾಜ್, ವೆಂಕಟರಮಣರೆಡ್ಡಿ, ಎಂಟಿಬಿ ನಾಗರಾಜ್, ಪ್ರಮೋದ್ ಮಾಧ್ವರಾಜ್, ಈಶ್ವರ ಕಂಡ್ರೆ, ಮುನಿರತ್ನ, ವಡ್ನಾಳ್ ರಾಜಣ್ಣ ಮತ್ತಿತರರು ಹಾಜರಿದ್ದರು.