ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಲಾಭದಾಯಕ ಹುದ್ದೆಯನ್ನು ಹೊಂದಿದ್ದು, ಅವರನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರಿ ಶಶಿಧರ್ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದಾರೆ, ಜೊತೆಗೆ ಗೃಹ ಸಚಿವ ಸ್ಥಾನವನ್ನೂ ಹೊಂದಿದ್ದಾರೆ. ಇವೆರಡೂ ಲಾಭದಾಯಕ ಹುದ್ದೆಯಾಗಿದೆ. ಹಾಗಾಗಿ ಪರಮೇಶ್ವರ್ ಅವರನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಶಶಿಧರ್ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳವಾರ ಪರಮೇಶ್ವರ್ ವಿರುದ್ಧ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಇದು ತುರ್ತು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿ ಜೂನ್ ತಿಂಗಳಿಗೆ ವಿಚಾರಣೆಯನ್ನು ಮುಂದೂಡಿದೆ.
-ಉದಯವಾಣಿ