ತಿರುವನಂತಪುರಂ,ಮೇ6-ಕೇರಳವನ್ನು ಬೆಚ್ಚಿ ಬೀಳಿಸಿದ ದಲಿತ ನರ್ಸಿಂಗ್ ವಿದ್ಯಾರ್ಥಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು 20ರಿಂದ 25 ವರ್ಷದ ಯುವಕರು ಎಂದು ಗುರುತಿಸಲಾಗಿದೆ. ವರ್ಕಲದಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಕಳೆದ 3ರಂದು ಆಟೋ ರಿಕ್ಷಾ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರು ಅಪಹರಿಸಿ ಆಯಂತಿ ಸೇತುವೆ ಸಮೀಪ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು.
ಈ ಗ್ಯಾಂಗ್ರೇಪ್ ಪ್ರಕರಣ ಕೇರಳ ಮಾತ್ರವಲ್ಲದೆ ಇಡೀ ದೇಶದಲ್ಲೇ ಸಂಚಲನ ಸೃಷ್ಟಿಸಿತ್ತು. ಅತ್ಯಾಚಾರಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಕೇರಳ ಪೊಲೀಸರು ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.