
ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಭದ್ರಾವತಿಯ ಪೂರ್ಣ ಪ್ರಜ್ಞ ಶಾಲೆಯ ಬಾಲಕ ಎಸ್. ರಂಜನ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಸಾಧನೆಯ ಗರಿ ಮುಡಿಗೆರಿಸಿಕೊಂಡಿದ್ದಾರೆ.
ಶಿವಮೊಗ್ಗೆ ಜಿಲ್ಲೆಯ ಭದ್ರಾವತಿಯ ಪೂರ್ಣ ಪ್ರಜ್ಞ ಶಾಲೆಯ ಬಾಲಕ ಎಸ್. ರಂಜನ್ ತಾನು ಪಡೆದ ಅಂಕವನ್ನು ಕಂಡು ಸಂತಸಗೊಂಡಿದ್ದಾರೆ.

ಕಠಿಣ ಪರಿಶ್ರಮದಿಂದಾಗಿ ತಾನು ಇಷ್ಟೊಂದು ಅಂಕ ಪಡೆಯಲು ಸಾಧ್ಯ ಆಯಿತು ಎಂದು ರಂಜನ್ ಸಂತಸವನ್ನು ಹಂಚಿಕೊಂಡಿದ್ದಾರೆ.
ಮೈಸೂರಿನ ಬಾಲಕಿ ಇಶೂ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. 625 ಕ್ಕೆ 624 ಅಂಕ ಗಳಿಸಿ ಸಾಧನೆ ಮಾಡಿದ್ದಾಳೆ. ಈಶೂ ಮೈಸೂರಿನ ಮರಿಮಲ್ಲಪ್ಪ ಶಾಲೆಯ ವಿದ್ಯಾರ್ಥಿನಿ ಆಗಿದ್ದಾಳೆ.
ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಶಾಲೆಯ ಸುಪ್ರಿತಾ ಕೂಡ 624 ಅಂಕ ಗಳಿಸಿ ಎರಡನೇ ಸ್ಥಾನ ಪಡೆದಿದ್ದಾಳೆ.