ಕರ್ನಾಟಕ

ತಂಗಿ ಮಗಳ ಮೇಲೆ ಅತ್ಯಾಚಾರ ಮಾಡಿದ ರಾಜಾಜಿನಗರ ಪೊಲೀಸ್ ಠಾಣೆಯ ಮುಖ್ಯಪೇದೆ !

Pinterest LinkedIn Tumblr

Rape11

ಬೆಂಗಳೂರು: ಪತ್ನಿಯ ತಮ್ಮನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ರಾಜಾಜಿನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಬಸವರಾಜನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಬಸವರಾಜ(೪೫) ಅವರು ಒಂದು ವಾರದ ಹಿಂದೆ ಮನೆಗೆ ಬಂದಿದ್ದ ಪತ್ನಿಯ ತಮ್ಮನ ೧೭ ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ಸಂಬಂಧಿಕರು ನೀಡಿರುವ ದೂರು ದಾಖಲಿಸಿಕೊಂಡಿರುವ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕಳುಹಿಸಿದ್ದಾರೆ.

ಕಳೆದ ವರ್ಷ ಕೂಡ ಬಸವರಾಜ ಮನೆಗೆ ಬಂದಿದ್ದ ಇದೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸುರೇಶ್ ಅವರು ತಿಳಿಸಿದ್ದಾರೆ.

Comments are closed.