
ಜೂನ್ 9 ಮತ್ತು 11ರಂದು ನಡೆಯಲಿರುವ ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಗ್ಗಂಟು ಮುಂದುವರಿದಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ಪಕ್ಷದ ಕಚೇರಿಯಲ್ಲಿ ಔಪಚಾರಿಕ ಮಾತುಕತೆ ನಡೆಸಲಾಯಿತು.
ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ಕುಮಾರ್, ಮುಖಂಡರಾದ ಆರ್.ಅಶೋಕ್, ವಿ.ಸೋಮಣ್ಣ, ಕಟ್ಟಾಸುಬ್ರಹ್ಮಣ್ಯನಾಯ್ಡು, ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖವಾಗಿ ವಿಧಾನಸಭೆಯಿಂದ ವಿಧಾನಪರಿಷತ್ ಹಾಗೂ ರಾಜ್ಯಸಭೆಗೆ ನಡೆಯಲಿರುವ ಚುನಾವಣಾ ಕಣಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆಸಲಾಯಿತು. ಆದರೆ, ಸರ್ವಸಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಮುಖಂಡರು ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ.
Comments are closed.