ರಾಷ್ಟ್ರೀಯ

ಅಸ್ಸಾಂನಲ್ಲಿ ಜನ ಬಿಜೆಪಿ ಕೈ ಹಿಡಿದಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ ಎಂದ ಪ್ರಧಾನಿ

Pinterest LinkedIn Tumblr

modi22

ನವದೆಹಲಿ: ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಇಂದು ಸಂಜೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಅಸ್ಸಾಂನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ ಎಂದರು. ಅಲ್ಲದೆ ಈ ಫಲಿತಾಂಶ ಎನ್ ಡಿಎ ಮೈತ್ರಿಕೂಟಕ್ಕೆ ಉತ್ಸಾಹದಾಯಕವಾಗಿದ್ದು, ಐದು ರಾಜ್ಯಗಳ ಮತದಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ಈಗ ಮತದಾರರಿಗೆ ಬಿಜೆಪಿ ಮೇಲೆ ವಿಶ್ವಾಸ ಹೆಚ್ಚುತ್ತಿದ್ದು, ಬಿಜೆಪಿಯ ಅಭಿವೃದ್ಧಿ ಪರ ಚಿಂತನೆಗೆ ಜನ ಬೆಂಬಲಿಸುತ್ತಿದ್ದಾರೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದಾರೆ.

Comments are closed.