ರಾಷ್ಟ್ರೀಯ

ಕೇಂದ್ರ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತ ಹಾಡೊಂದನ್ನು ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

modi21

ನವದೆಹಲಿ: ಎನ್ ಡಿ ಎ ನೇತೃತ್ವದ ಕೇಂದ್ರ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತ ಹಾಡೊಂದನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ.

ಮೇರಾ ದೇಶ್ ಬದಲ್ ರಹಾ ಹೈ…. ಆಗೇ ಬಢ ರಹಾ ಹೈ ಎನ್ನುವ ಶೀರ್ಷಿಕೆಯಿರುವ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಈ ಹಾಡಿನಲ್ಲಿ ಎನ್ ಡಿಎ ಸರ್ಕಾರ ಬಾಲಿಕಿಯರಿಗೆ ಶಿಕ್ಷಣ, ರೈತರಿಗೆ ವಿಮೆ, ಗ್ರಾಮೀಣ ಭಾಗಗಳಿಗೆ ರಸ್ತೆ ಸಂಪರ್ಕ ಸೇರಿದಂತೆ ಬಡವರಿಗಾಗಿ ತೆಗೆದುಕೊಂಡ ಕ್ರಮ ಮತ್ತು ಯೋಜನೆಗಳ ಬಗ್ಗೆ ವಿವರಣೆ ಮಾಡಲಾಗುತ್ತದೆ.

Comments are closed.