
ಬೆಂಗಳೂರು: 18 ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ದಾರ್ಜಿಲಿಂಗ್ ಮೂಲದ ದೀಪೇಶ್ ಪ್ರಧಾನ್(26) ಎಂಬಾತನನ್ನು ಸಾರ್ವಜನಿಕರು ಹಿಗ್ಗಾಮಗ್ಗಾ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಹೆಚ್ಎಸ್ಆರ್ ಲೇಔಟನ್ ನಲ್ಲಿ ಈ ಘಟನೆ ನಡೆದಿದೆ. ಮಗುವಿನ ಪೋಷಕರು ನೇಪಾಳದ ಮೂಲದವರು. ಆರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಹೆಚ್ಎಸ್ಆರ್ ಲೇಔಟ್ ನಲ್ಲಿ ಶೆಡ್ ಹಾಕಿಕೊಂಡಿದ್ದಾರೆ. ಅಲ್ಲೇ ಸಮೀಪದಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದಾರೆ.
ಇಬ್ಬರು ಪೋಷಕರು ಕೆಲಸಕ್ಕೆ ಹೋಗಿದ್ದಾಗ, ಮಗುವಿನ ತಂದೆಯ ಸ್ನೇಹಿತ ದೀಪೇಶ್ ಮನೆಗೆ ನುಗ್ಗಿ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ.
ಮಾರನೇ ದಿನ ಮಗುವಿಗೆ ಸ್ನಾನ ಮಾಡಿಸಬೇಕಾದರೆ, ಮಗುವಿನ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ. ಸ್ಥಳೀಯರಿಗೆ ಈ ವಿಷಯ ತಿಳಿಸಿದಾಗ ದೀಪೇಶ್ ಅತ್ಯಾಚಾರವೆಸಗಿರುವ ವಿಷಯ ಬೆಳಕಿಗೆ ಬಂದಿದೆ. ಕುಪಿತಗೊಂಡ ಪೋಷಕರು ಮತ್ತು ಸಾರ್ವಜನಿಕರು ದೀಪೇಶ್ ನನ್ನು ಹಿಗ್ಗಾಮಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ದೀಪೇಶ್ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Comments are closed.