ಕರ್ನಾಟಕ

ನೈತಿಕ ಮೌಲ್ಯ ರೂಢಿಸಿಕೊಳ್ಳಿ: ಶಾಸಕ ರಮೇಶ್ ಕುಮಾರ್

Pinterest LinkedIn Tumblr

21KRPuram1clrಕೆಆರ್‌ಪುರ, ಮೇ ೨೧- ವಿದ್ಯಾರ್ಥಿಗಳು ಶಿಕ್ಷಣ ದೊಂದಿಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ್ ಕುಮಾರ್ ಅವರು ಇಂದಿಲ್ಲಿ ತಿಳಿಸಿದರು.
ಕೇಂಬ್ರಿಡ್ಜ್ ವಿದ್ಯಾಸಂಸ್ಥೆಯ ಆರನೇ ವರ್ಷದ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆಯಲ್ಲಿ ಮಾನವ ಮೌಲ್ಯಗಳು ಕುಂಠಿತವಾಗುತ್ತಿರುವುದು ಬೇಸರದ ಸಂಗತಿ.
ಪದವಿಗಳೊಂದಿಗೆ ಮಾನವೀಯ ಮೌಲ್ಯ, ನೈತಿಕತೆ ಹಾಗೂ ತತ್ವ ಸಿದ್ಧಾಂತಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಪದವಿ ಪಡೆದ ವಿದ್ಯಾರ್ಥಿಗಳು ಸಮಾಜದ ಏಳಿಗೆಯತ್ತ ಗಮನಹರಿಸಬೇಕು.
ಆಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದರು.
ಸಮಾಜಮುಖಿ ಕಾರ್ಯಗಳಲ್ಲಿ ಯುವ ಪೀಳಿಗೆ ತೊಡಗಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿರುವ ನ್ಯೂನ್ಯತೆಗಳನ್ನುತೊಡೆದು ಹಾಕಲು ಸಾಧ್ಯ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೇಂಬ್ರಿಡ್ಜ್ ವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಕೆ. ಮೋಹನ್ ಮಾತನಾಡಿ, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸಮಾಜದ ಪರಿವರ್ತನೆಗೆ ನಾಂದಿ
ಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಪ್ರಾಂಶುಪಾಲ ಸುರೇಶ್, ಪ್ರೊ. ಗುರುಚರಣ್ ಮತ್ತಿತರರು ಇದ್ದರು.

Comments are closed.