ನವದೆಹಲಿ: ಬಿಹಾರಾ ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರ್ ಭವನ ಎದುರುಗಡೆ ಪ್ರತಿಭಟನೆ ನಡೆಸುತ್ತಿದ್ದ ಕನ್ಹಯ್ಯಾ ಕುಮಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಕಲಿ ಪ್ರಕರಣವೊಂದರಲ್ಲಿ ಕಾಲೇಜಿನ ಪ್ರಾಂಶುಪಾಲರೊಬ್ಬ ಅನಗತ್ಯ ದೂರು ದಾಖಲಿಸಿ ವಿದ್ಯಾರ್ಥಿಗಳನ್ನು ಜೈಲಿಗೆ ಅಟ್ಟಿರುವುದು ಸೇರಿದಂತೆ, ಇತರ ದೌರ್ಜನ್ಯಗಳ ಬಗ್ಗೆ ಹೋರಾಟ ಮಾಡಲಾಗುತ್ತಿದೆ ಎಂದು ಕನ್ಹಯ್ಯಾ ಕುಮಾರ್ ತಿಳಿಸಿದ್ದಾರೆ.
ಪಾಟ್ನಾ ಆರ್ಟ್ಸ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕ್ರೂರತೆಯನ್ನು ಮೆರೆದಿದ್ದು, ಕೂಡಲೇ ಬಂಧಿಸಿದ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಪಿಎಸ್‌ಸಿ ಮತ್ತು ಯುಪಿಎಸ್‌ಸಿ ಪರೀಕ್ಷೆಗಳನ್ನು ಪ್ರಸ್ತುತ ಒಂದೇ ದಿನದಂದು ನಡೆಸುತ್ತಿರುವುದನ್ನು ರದ್ದುಗೊಳಿಸಿ ಬೇರೇ ಬೇರೆ ದಿನಾಂಕಗಳನ್ನು ರದ್ದುಗೊಳಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಬಿಹಾರ್ ಸರಕಾರ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಘೋಷಿಸಿದರು,
Comments are closed.