
ಮಂಗಳೂರು / ಬಂಟ್ವಾಳ, ಜೂ.12: ಓಮ್ನಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನೇರಳಕಟ್ಟೆ ಸಮೀಪದ ಕೊಡಾಜೆಯ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಪುತ್ತೂರಿನ ಸಂಜೀವ ಶೆಟ್ಟಿ ಬಟ್ಟೆ ಮಳಿಗೆಯ ಸಿಬ್ಬಂದಿಗಳಾದ ಸಂಧ್ಯಾ, ನಯನಾ ಹಾಗೂ ಓಮ್ನಿ ಕಾರಿನ ಚಾಲಕ ತೇಜಸ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಪುತ್ತೂರು ಕಡೆ ಸಂಚಾರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಗೆ ಪುತ್ತೂರಿನಿಂದ ಪಣೋಲಿಬೈಲ್ ಕಡೆ ಸಂಚಾರಿಸುತ್ತಿದ್ದ ಓಮ್ನಿ ಕಾರು ತನ್ನ ಮುಂದಿನಿಂದ ಸಾಗುತ್ತಿದ್ದ ಆಟೊ ರಿಕ್ಷಾವೊಂದನ್ನು ಓವರ್ಟೇಕ್ ಮಾಡುವ ಸಂದರ್ಭ ಈ ಅಪಘಾತ ಸಂಭವಿಸಿದೆ.
ಪುತ್ತೂರಿನ ಸಂಜೀವ ಶೆಟ್ಟಿ ಜವುಳಿ ಮಳಿಗೆಯ 11 ಮಂದಿ ಸಿಬ್ಬಂದಿ ಪಣೋಲಿಬೈಲಿನ ದೈವಸ್ಥಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಪುತ್ತೂರಿನಿಂದ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಇವರಿದ್ದ ಓಮ್ನಿ ಕಾರು ಕೊಡಾಜೆ ತಲುಪಿದೆ ವೇಳೆ ಎದುರಿದ್ದ ಆಟೊ ರಿಕ್ಷಾವೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸ್ ಬಸ್ಗೆ ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಓಮ್ನಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓಮ್ನಿಯಲ್ಲಿದ್ದ ಇತರ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಈ ಪೈಕಿ ಮೂವರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Comments are closed.