
ಮ೦ಗಳೂರು, ಜೂ.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಾಗಾರ ಸಮಾರಂಭವು ಭಾನುವಾರ ಮಂಗಳೂರು ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಅವರು ಉದ್ಘಾಟಿಸಿ, ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರಕಾರದಿಂದ ಕಠಿನ ನೀತಿಗಳನ್ನು ಹಾಗೂ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಬಾಲಕಾರ್ಮಿಕತೆಯ ಪಿಡುಗು ಕೇವಲ ಜಿಲ್ಲೆಯಿಂದ ಮಾತ್ರವಲ್ಲ, ದೇಶದಿಂದಲೇ ಬಿಟ್ಟು ತೊಲಗಬೇಕು. ದ.ಕ. ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನವು ನಡೆಯುತ್ತಿದ್ದು, ಇದಕ್ಕೆ ಜನರ ಸಹಕಾರವು ಅಗತ್ಯ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕೃಪಾ ಅಮರ ಆಳ್ವ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಗೇಶ್, ದ.ಕ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಡಿಸಿಪಿ ಶಾಂತರಾಜು, ಹೆಚ್ಚುವರಿ ಎಸ್ಪಿ ಡಾ| ವೇದಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಕೆ. ನಿಕೇಶ್ ಶೆಟ್ಟಿ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಹಿಲ್ಡಾ ರಾಯಪ್ಪನ್, ಡಿಡಿಪಿಐ ವಾಲ್ಟರ್ ಎಚ್. ಡಿಮೆಲ್ಲೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಚಂದ್ರಹಾಸ್,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Comments are closed.