ಕರಾವಳಿ

ಜೂ.21ರಂದು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪಾವ್ಲ್ ಡಿಸೋಜರಿಗೆ ಪೌರ ಸನ್ಮಾನ 

Pinterest LinkedIn Tumblr
Bisup_house_meet_1
ಮಂಗಳೂರು, ಜೂ.14: ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರು 75 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜೂ.21ರಂದು ಅಪರಾಹ್ನ 3:30ಕ್ಕೆ ಮಂಗಳೂರು ನಾಗರಿಕರ ಪರವಾಗಿ ಪೌರ ಸನ್ಮಾನವನ್ನು ಮಾಡಲಾಗುವುದು ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಮಾಹಿತಿ ನೀಡಿದ್ದಾರೆ.
ಮನಪಾ ಮೇಯರ್ ಕೆ. ಹರಿನಾಥ್‌ರ ಅಧ್ಯಕ್ಷತೆಯಲ್ಲಿ ಪೌರಸನ್ಮಾನ ನಡೆಯಲಿದ್ದು, ಮೆರವಣಿಗೆ ಮೂಲಕ ಬಿಷಪ್‌ರನ್ನು ವೇದಿಕೆಗೆ ಕರೆತರಲಾಗುವುದು. ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಡಾ.ಎಂ.ಶಾಂತರಾಮ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಅವರು ಸೋಮವಾರ ನಗರದ ಬಿಷಪ್‌ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Bisup_house_meet_2 Bisup_house_meet_3 Bisup_house_meet_4 Bisup_house_meet_5 Bisup_house_meet_6
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಬರ್ನಡ್ ಮೊರಾಸ್, ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ, ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಮುಂತಾದವರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಾರ್ಯಕ್ರಮ ಸಂಚಾಲಕ ಹಾಗೂ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಜೆ.ಬಿ.ಕ್ರಾಸ್ತ, ಎಂ.ಪಿ. ನೊರೊನ್ಹಾ, ರಾಯ್ ಕ್ಯಾಸ್ಟಲಿನೊ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

Comments are closed.