ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ದಿಸೆಯಲ್ಲಿ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಪ್ರೋತ್ಸಾಹಿಸುವೆ ಎಂದು ಜಿಲ್ಲಾ ಬಿಜೆಪಿ ಅದ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಿಕಟ ಪೂರ್ವ ಅದ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಅವರಿಂದ ಅಧಿಕಾರ ಸ್ವೀಕರಿಸಿದ ಮಟ್ಟಾರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ಮೇಲೆ ಹೊರಿಸಿರುವ ಜವಾಬ್ಧಾರಿಯನ್ನು ಯಶಸ್ವಿಯಾಗಿ ನಿಭಾಯಿಸಲು ಎಲ್ಲರ ಬೆಂಬಲ , ಪ್ರೋತ್ಸಾಹದ ಅಗತ್ಯವಿದೆ. ೨೦೧ರ ಚುನಾವಣೆಯಲ್ಲಿ ಮತ್ತೆ ಕಲಮಲ ಅರಳಿ ೫ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು ಸಾಧಿಸಬೇಕಾಗಿದೆ. ಇದಕ್ಕಾಗಿ ಸಂಘಟಿತ ಕೆಲಸ ಮಾಡುತ್ತೇನೆ ಎಂದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಮಾತನಾಡಿ ನಾನು ಅದ್ಯಕ್ಷನಾಗಿ ಜವಾಬ್ಧಾರಿ ವಹಿಸಿಕೊಳ್ಳುವ ಸಮಯದಲ್ಲಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಇತ್ತು. ಆದರೆ ಎಲ್ಲಾ ಕಾರ್ಯಕರ್ತರು, ಮುಖಂಡರು, ಜನರ ಪ್ರೋತ್ಸಹದಿಂದ ಪಕ್ಷ ಸಂಘಟಿಸಲು ಸಾದ್ಯವಾಯಿತು. ಪರಿಣಾಮ ಲೋಕಸಭೆ, ವಿಧಾನಪರಿಷತ್, ಜಿ.ಪಂ, ತಾ.ಪಂ, ಗ್ರಾಮಪಂಚಾಯತ್ ಚುನಾವಣೆಯಲ್ಲೂ ಗೆಲುವು ದೊರಕಿತು. ಸಂಘಟನೆ ಮತ್ತು ಫಲಿತಾಂಶದಲ್ಲಿ ನಂ.೧ ಜಿಲ್ಲೆ ಎಂಬ ಹೆಗ್ಗಳಿಗೆ ಪಡೆಯಿತು ಎಂದರು.
Comments are closed.