ರಾಷ್ಟ್ರೀಯ

ಬಿಜೆಪಿಯ ಮುಂದಿನ ರಾಷ್ಟ್ರಪತಿ ಅಭ್ಯರ್ಥಿ ಯಾರು ಗೊತ್ತಾ?

Pinterest LinkedIn Tumblr

bjpನವದೆಹಲಿ: ಬಿಜೆಪಿ ಪಕ್ಷದಲ್ಲಿ ಅಟಲ್ ಬಿಹಾರ್ ವಾಜಪೇಯಿ, ಎಲ್‌.ಕೆ.ಆಡ್ವಾಣಿ ನಂತರ ಮೂರನೇ ಆಧಾರ ಸ್ಥಂಭ ಎಂದು ಪರಿಗಣಿಸಲಾಗುತ್ತಿದ್ದ ಮುರಳಿ ಮನೋಹರ್ ಜೋಷಿ, ಪಕ್ಷದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಲು ರಣತಂತ್ರ ಆರಂಭಿಸಿದ್ದಾರೆ.

ಅಲಹಾಬಾದ್‌ನಲ್ಲಿ ನಡೆದಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ವಾಜಪೇಯಿ ಮತ್ತು ಆಡ್ವಾಣಿಯವರೊಂದಿಗೆ ಪೋಸ್ಟರ್‌ಗಳಲ್ಲಿ ಕಾಣಿಸಿಕೊಂಡಿರುವುದು ಅವರ ರಾಷ್ಟ್ರಪತಿ ಅಭ್ಯರ್ಥಿ ಆಕಾಂಕ್ಷೆಯನ್ನು ಎತ್ತಿ ತೋರಿಸುತ್ತಿವೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅವಧಿ 2017ರಲ್ಲಿ ಮುಕ್ತಾಯಗೊಳ್ಳಲಿದ್ದು, ನಂತರ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಜೋಷಿ ಪಕ್ಷದ ನಾಯಕರನ್ನು ಓಲೈಸಿಕೊಳ್ಳಲು ಸಿದ್ದತೆ ನಡೆಸಿದ್ದಾರೆ.

ಬಿಜೆಪಿ ಮುಖಂಡ ಜೋಷಿ, ಇತ್ತೀಚೆಗೆ ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಬಿಜೆಪಿ, ಆರೆಸ್ಸೆಸ್ ನಾಯಕರನ್ನು ಭೇಟಿ ಮಾಡಿ ತಮ್ಮ ಇಚ್ಚೆಯನ್ನು ಬಹಿರಂಗಪಡಿಸಿದ್ದಾರೆ.

ಪ್ರಧಾನಿ ಮೋದಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾದ ಜೋಷಿ, ರಾಷ್ಟ್ರಪತಿ ಅಭ್ಯರ್ಥಿ ವಿಷಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮ ವರದಿಗಳ ಪ್ರಕಾರ, ಮುರಳಿ ಮನೋಹರ್ ಜೋಷಿ, ಜೂನ್ ತಿಂಗಳ ಮೊದಲ ವಾರದಲ್ಲಿ ನಾಗ್ಪುರ್‌ನಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ಭಾಗವತ್ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಕೇಂದ್ರದ ಮಾಜಿ ಮಾನವ ಸಂಪನ್ಮೂಲ ಖಾತೆ ಸಚಿವ ಜೋಷಿ, ಜೂನ್ 6-7 ರಂದು ಮುಂಬೈನಲ್ಲಿ ಇತರ ಆರೆಸ್ಸೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments are closed.