
ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ಅವರು ಭಾರತದ ಸ್ಫೋಟಕ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಅಬ್ಬರಕ್ಕೆ ಫಿದಾ ಆಗಿದ್ದು, ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಕೊಹ್ಲಿಗಿದೆ. ಅಲ್ಲದೆ ಅವರು ಕಠಿಣ ಪರಿಸ್ಥಿತಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗಿಂತ ಉತ್ತಮ ಎಂದು ಹೇಳಿದ್ದಾರೆ.
ರಾಷ್ಟ್ರೀಯ ನಿಯತಕಾಲಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಾಕ್ ಮಾಜಿ ಕ್ರಿಕೆಟಿಗ, ಕ್ರಿಕೆಟ್ ಇತಿಹಾಸ ನೋಡಿದರೆ ಕೆಲವೇ ಕ್ರಿಕೆಟಿಗರು ನಮ್ಮ ಕಣ್ಣಮುಂದೆ ಬರುತ್ತಾರೆ. ಎಂಬತ್ತರ ದಶಕದಲ್ಲಿ ವಿವಿ ರಿಚರ್ಡ್ಸ್, ನಂತರ ಬ್ರಿಯಾನ್ ಲಾರಾ ಹಾಗೂ ಸಚಿನ್ ತೆಂಡುಲ್ಕರ್ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ ವಿರಾಟ್ ಇವರೆಲ್ಲರಿಗಿಂತ ಭಿನ್ನವಾಗಿದ್ದು, ತಮ್ಮ ಬತ್ತಳಿಕೆಯಲ್ಲಿ ಕ್ರಿಕೆಟ್ನ ಎಲ್ಲಾ ಹೊಡೆತಗಳನ್ನು ಹೊಂದಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.
ವಿರಾಟ್ ಕೊಹ್ಲಿಯ ಅಗ್ರೆಸಿವ್ ಆಟ ವಿರೋಧಿ ತಂಡದ ಮೇಲೆ ಒತ್ತಡ ಹೇರುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ರೀತಿಯ ಆಟವನ್ನು ವಿರಾಟ್ ಅವರಿಂದ ಮಾತ್ರ ನಿರೀಕ್ಷಿಸಲು ಸಾಧ್ಯ. ಸಚಿನ್ ತಾಳ್ಮೆಯ ಆಟಕ್ಕೆ ಹೆಚ್ಚು ಗಮನ ನೀಡುತ್ತಿದ್ದರು ಎಂದು ಈ ಸಂದರ್ಭದಲ್ಲಿ ಖಾನ್ ಹೇಳಿದ್ದಾರೆ.
Comments are closed.