
ಕೊಚ್ಚಿ: ಕೇರಳದ ಪೆರುಂಬುವೂರಿನಲ್ಲಿ ತನ್ನ ಮನೆಯಲ್ಲೇ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾದಿದ್ದ ಕಾನೂನು ವಿದ್ಯಾರ್ಥಿನಿ ಜಿಶಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ಅಸ್ಸಾಂ ಮೂಲಕ ಕಾರ್ಮಿಕನೊಬ್ಬನನ್ನು ಬಂಧನಕ್ಕೊಳಪಡಿಸಿದ್ದಾರೆ.
ಜಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು ಹಲವಾರು ಸಾಕ್ಷ್ಯಾಧಾರಗಳನ್ನು ಹುಡುಕಿದ್ದು, ಸಾಕ್ಷ್ಯಾಧಾರದ ಅನ್ವಯ ಇದೀಗ ಕೊಚ್ಚಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೊಬ್ಬನನ್ನು ಬಂಧಿಸಿದ್ದಾರೆ.
ಕಳೆದೆರಡು ದಿನಗಳ ಹಿಂದಷ್ಟೇ ಬಂಧನಕ್ಕೊಳಗಾಗಿದ್ದ ವ್ಯಕ್ತಿ ಕೂಡ ವಿಚಾರಣೆ ವೇಳೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತ ನೀಡಿದ ಮಾಹಿತಿ ಅನ್ವಯ ಕೊಚ್ಚಿಯಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಂಕಿತಯ ವ್ಯಕ್ತಿಗಳ ರಕ್ತವನ್ನು ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 30-ವರ್ಷದ ದಲಿತ ಕಾನೂನು ವಿದ್ಯಾರ್ಥಿನಿಯಾಗಿದ್ದ ಜಿಶಾ ಎಂಬ ಯುವತಿಯನ್ನು ಏ.28 ರಂದು ಆಕೆಯ ಮನೆಯಲ್ಲೇ ಅತ್ಯಾಚಾರ ಮಾಡಿ ಧಾರುಣವಾಗಿ ಹತ್ಯೆ ಮಾಡಲಾಗಿತ್ತು.
Comments are closed.