ರಾಷ್ಟ್ರೀಯ

ಜಿಂಬಾಬ್ವೆ ಅತ್ಯಾಚಾರ ಪ್ರಕರಣ: ಬಂಧಿತ ಭಾರತೀಯ ಆರೋಪಿ ಬಿಡುಗಡೆ

Pinterest LinkedIn Tumblr

rape-2ನವದೆಹಲಿ: ಭಾರತೀಯ ಕ್ರಿಕೆಟ್ ತಂಡಕ್ಕೆ ಕಳಂಕ ಹಚ್ಚಿದ್ದ ಹರಾರೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಕ್ಕೊಳಗಾಗಿದ್ದ ಭಾರತೀಯ ವ್ಯಕ್ತಿಯನ್ನು ಜಿಂಬಾಬ್ವೆ ಹೈಕೋರ್ಟ್ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ ಎಂದು ಬುಧವಾರ ಆ ವ್ಯಕ್ತಿಯ ಕಾರ್ಯನಿರ್ವಹಿಸುತ್ತಿದ್ದ ಕಂಪನಿ ಹೇಳಿದೆ.
ಭಾರತ ಮತ್ತು ಜಿಂಬಾಬ್ವೆ ದೇಶಗಳು ಮಾತ್ರವಲ್ಲದೇ ಇಡೀ ಕ್ರಿಕೆಟ್ ಜಗತ್ತಿನಲ್ಲಿ ವ್ಯಾಪಕ ಚರ್ಚೆಗೀಡಾಗಿದ್ದ ಈ ಅತ್ಯಾಚಾರ ಪ್ರಕರಣ ಸಂಬಂಧ ಕಳೆದ ಭಾನುವಾರ ಭಾರತ ಮತ್ತು ಜಿಂಬಾಬ್ವೆ ಕ್ರಿಕೆಟ್ ಸರಣಿಯ ಪ್ರಾಯೋಜನೆ ವಹಿಸಿರುವ ಕಂಪನಿಯ ನೌಕರ ಸೇರಿದಂತೆ ಇಬ್ಬರು ಭಾರತೀಯರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹರಾರೆಯ ಹೈಕೋರ್ಟ್ನ ಜಸ್ಟೀಸ್ ಮವಡಜೆ ಸಾಕ್ಷಾಧಾರಗಳ ಕೊರತೆಯಿಂದ ಬಂಧಿತ ಆರೋಪಿಯನ್ನು ದೋಷಮುಕ್ತಗೊಳಿಸಿ ತಕ್ಷಣ ಬಿಡುಗಡೆಗೊಳಿಸಿದ್ದಾರೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಟೀಂ ಇಂಡಿಯಾ ಆಟಗಾರನನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ ಎಂಬ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿತ್ತು. ನಂತರ ಬಿಸಿಸಿಐ ಮತ್ತು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾರತೀಯ ಕ್ರಿಕೆಟ್ ತಂಡದ ಯಾವುದೇ ಸದಸ್ಯ ಬಂಧಿತನಾಗಿಲ್ಲ ಎಂದು ಸ್ಪಷ್ಟನೆ ನೀಡಿತ್ತು.

Comments are closed.