
ಬೆಂಗಳೂರು: ನಿವೃತ್ತ ಡಿವೈಎಸ್ಪಿ ಅನುಪಮಾ ಶೆಣೈ ಅವರು ನಿನ್ನೆ ರಾತ್ರಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಡಿವೈಎಸ್ಪಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರಮುಖ ರಾಜಕಾರಣಿಗಳನ್ನು ಭೇಟಿ ಮಾಡುತ್ತಿರುವ ಶೆಣೈಯವರು ಗೌಡರನ್ನು ಕೂಡ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.
ನಡೆಸುತ್ತಿರುವ ತಮ್ಮ ಹೋರಾಟಕ್ಕೆ ಬೆಂಬಲ ಹಾಗೂ ಆಶೀರ್ವಾದ ಬೇಕು ಎಂದು ಗೌಡರನ್ನು ಶೆಣೈ ಕೋರಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ರಾಜಕೀಯ ವಿಚಾರ ಸೇರಿದಂತೆ ಯಾವುದೇ ವಿಷಯ ಗೌಡರ ಭೇಟಿ ಸಂದರ್ಭದಲ್ಲಿ ಪ್ರಸ್ತಾಪವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಗೌಡರ ಭೇಟಿಗೂ ಮುನ್ನ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‌ರವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯಕ್ ವಿರುದ್ದ ಸಿಡಿದೆದ್ದು ಡಿವೈಎಸ್ಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅನುಪಮಾ ಶೆಣೈ ಅವರ, ರಾಜಕಾರಣಿಗಳ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
Comments are closed.