ಶ್ರೀನಗರ:ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಸಿಆರ್ ಪಿಎಫ್ ಯೋಧರು ಬರುತ್ತಿದ್ದ ಬಸ್ ಅನ್ನು ಗುರಿಯಾಗಿರಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ 5 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಪ್ರತಿದಾಳಿಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಜಮ್ಮು ಕಾಶ್ಮೀರದ ಪಾಂಪೋರ್‌ನಲ್ಲಿ ಈ ಘಟನೆ ನಡೆದಿದೆ. ಸಿಆರ್ ಪಿಎಫ್ ಯೋಧರ ಬಸ್ ಮೇಲೆ ಏಕಾಏಕಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 20 ಸಿಆರ್ ಪಿಎಫ್ ಯೋಧರು ಗಾಯಗೊಂಡಿದ್ದಾರೆ. ಇದು ಇತ್ತೀಚೆಗೆ ನಡೆದ ದೊಡ್ಡ ದಾಳಿ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಉಗ್ರರು ಮತ್ತು ಸಿಆರ್ ಪಿಎಫ್ ಯೋಧರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಸೇನಾ ಮೂಲಗಳು ಹೇಳಿವೆ.
-ಉದಯವಾಣಿ
Comments are closed.