ನವದೆಹಲಿ: ಮುಂಬರುವ ವೆಸ್ಟ್ಇಂಡೀಸ್ ಸರಣಿಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವಿರಾಟ್ ಕೊಹ್ಲಿ ಕಸರತ್ತು ನಡೆಸುತ್ತಿದ್ದರೆ, ಸೀಮಿತ ಓವರ್ ತಂಡದ ನಾಯಕ ಮಹೇಂದ್ರಸಿಂಗ್ ಧೋನಿ ಮಳೆಯಲ್ಲಿಯೇ ರಾಂಚಿಯ ಗಲ್ಲಿ ಗಲ್ಲಿಗಳಲ್ಲಿ ಬೈಕ್ ಓಡಿಸುತ್ತಿದ್ದಾರೆ.
ಜುಲೈ 6ರಿಂದ ವಿಂಡೀಸ್ನಲ್ಲಿ ಟೆಸ್ಟ್ ಸರಣಿ ಆರಂಭವಾಗುವ ಹಿನ್ನೆಲೆಯಲ್ಲಿ ವಿರಾಟ್ ಹಾಗೂ ಟೆಸ್ಟ್ ತಂಡದ ಸದಸ್ಯರು ಅನಿಲ್ ಕುಂಬ್ಳೆ ಮಾರ್ಗದರ್ಶನದಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ವಿರುದ್ಧವಾಗಿ 34ರ ಹರೆಯದ ಧೋನಿ ತಮ್ಮ ನೆಚ್ಚಿನ ಬೈಕ್ನೊಂದಿಗೆ ಮಳೆಯಲ್ಲಿಯೇ ರಾಂಚಿಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಸಂತೋಷಪಡುತ್ತಿದ್ದಾರೆ. ಅಷ್ಟೇ ಅಲ್ಲ ಈ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.
ಇದೇ ತಿಂಗಳು ಜಿಂಬಾಬ್ವೆಯಲ್ಲಿ ನಡೆದ ಏಕದಿನ ಹಾಗೂ ಟಿ20 ಸರಣಿಯನ್ನು ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸುಲಭವಾಗಿ ವಶಪಡಿಸಿಕೊಂಡಿತ್ತು.
Comments are closed.