ಉಡುಪಿ: ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಒಂದು ದಿನದ ಸಮ್ಮೇಳನವು ರಾಜ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇತ್ತೀಚಿಗೆ ನಡೆಯಿತು.

ಈ ಸಮ್ಮೇಳನದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭಾಗವಹಿಸಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಉಡುಪಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮನವಿಯನ್ನು ಸಲ್ಲಿಸಿರುವುದಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ….
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಎಚ್.ಕೆ.ಪಾಟೀಲ್ರವರನ್ನು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ ಮಾಡಿ , ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿಯನ್ನು ನೀಡಿರುವುದಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Comments are closed.