ರಾಮನಗರ ಜು.02 : ಬೈಕ್ ವ್ಹೀಲಿಂಗ್ ಮಾಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಂದು ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ರಾಮನಗರದ ಅರ್ಚಕರಹಳ್ಳಿ ಸಮೀಪದ ಕುಂಬಾಪುರ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕೇರಳ ಮೂಲದ 22 ವರ್ಷದ ಅಭಿನವ್, ಒರಿಸ್ಸಾ ಮೂಲದ 23 ವರ್ಷದ ನವಜೋತ್ ಎಂಬ ಯುವಕರು ಮೃತಪಟ್ಟಿದ್ದಾರೆ.
ಇವರು ಬೆಂಗಳೂರಿನ ಬೃಂದಾವನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು.

Comments are closed.