ಉಡುಪಿ: ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ವಿಚಾರವಾಗಿ ಸೂಕ್ತ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಯಿಂದ ಸದನದ ಒಳಗೂ ಹೊರಗೂ ಪ್ರತಿಭಟನೆ ನಡೆಸಲಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಒಬ್ಬರು ಮಹಿಳಾ ಜಿಲ್ಲಾಧಿಕಾರಿಯೇ ಪೊಲೀಸ್ ಠಾಣೆಗೆ ದೂರು ನೀಡಿ ಸಿಎಂ ಆಪ್ತರಿಂದ ರಕ್ಷಣೆ ಬೇಕು ಎಂದಿರುವುದು ಸಿದ್ದರಾಮಯ್ಯ ಅವರ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿ. ಉನ್ನತ ಅಧಿಕಾರಿಗಳಿಗೇ ಈ ರೀತಿಯ ವ್ಯವಸ್ಥೆ ಆದ್ರೆ ಸಾಮಾನ್ಯ ಜನರಿಗೆ ಯಾವ ರೀತಿಯ ರಕ್ಷಣೆ ಮಾಡಲು ಸಾದ್ಯ ಎಂದು ಪ್ರಶ್ನಿಸಿದ ಅವರು ಡಿವೈಎಸ್ಪಿ ಗಣಪತಿ ಅವರ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿ ಸದನದ ಒಳಗೆ ಹಾಗೂ ಹೊರಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
Comments are closed.