ಕರಾವಳಿ

ಡಿವೈಎಸ್‌ಪಿ ಎಂ.ಕೆ.ಗಣಪತಿಯವರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಹಾಗೂ ಸಚಿವ ಜಾರ್ಜ್‌ರನ್ನು ಬಂಧಿಸಲು ಆಗ್ರಹ

Pinterest LinkedIn Tumblr

Bjp_Protest_DYsp_1

ಮಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಹಾಗೂ ಪ್ರಕರಣದಲ್ಲಿ ಹೆಸರಿಸಲಾಗಿರುವ ಸಚಿವ ಜಾರ್ಜ್‌ರವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯುತು.

ರಾಜ್ಯದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ನೆಲೆ ಇಲ್ಲದಂತಾಗಿದೆ. ಡಿವೈಎಸ್ಪಿ ಗಣಪತಿ ಮೃತಪಟ್ಟ ಎರಡು ದಿನಗಳಾದರೂ ಸಾವಿಗೆ ಮೊದಲೇ ಅವರು ಹೆಸರಿಸಿರುವವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

Bjp_Protest_DYsp_2 Bjp_Protest_DYsp_3 Bjp_Protest_DYsp_4 Bjp_Protest_DYsp_5 Bjp_Protest_DYsp_6 Bjp_Protest_DYsp_7 Bjp_Protest_DYsp_8 Bjp_Protest_DYsp_9

ಗಣಪತಿ ಆತ್ಮಹತ್ಯೆಗೆ ಕಾರಣರಾದವರು ಎಷ್ಟೇ ದೊಡ್ಡ ಹುದ್ದೆಯಲ್ಲಿದ್ದರೂ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು. ಜಾರ್ಜ್‌ ಅವರು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಯೋಗೀಶ್ ಭಟ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೂಪಾ ಡಿ.ಬಂಗೇರ, ನಗರ ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ರಾಜೇಂದ್ರ ಕುಮಾರ್, ನಾಯಕರಾದ ರವಿಶಂಕರ್ ಮಿಜಾರು ಹಾಗೂ ಪಕ್ಷದ ಇತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.