ರಾಷ್ಟ್ರೀಯ

ಕಾಶ್ಮೀರ ಗಲಭೆ: ಸೋನಿಯಾ, ಅಬ್ದುಲ್ಲಾ ಜತೆ ರಾಜನಾಥ್ ಮಾತುಕತೆ

Pinterest LinkedIn Tumblr

rajanathನವದೆಹಲಿ (ಪಿಟಿಐ): ಕಾಶ್ಮೀರದ ಗಲಭೆ ಕುರಿತು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಓಮರ್ ಅವರೊಂದಿಗೆ ಮಾತುಕತೆ ನಡೆಸಿದರು.

ದೂರವಾಣಿ ಮೂಲಕ ಸೋನಿಯಾ ಮತ್ತು ಓಮರ್ ಅವರನ್ನು ಸಂಪರ್ಕಿಸಿದ ರಾಜನಾಥ್ ಸಿಂಗ್, ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವ ಬಗ್ಗೆ ಚರ್ಚಿಸಿದರು ಎಂದು ತಿಳಿದು ಬಂದಿದೆ.

ದೇಶದ ಭದ್ರತೆ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಗಲಭೆಯಲ್ಲಿ 23 ಮಂದಿ ಮೃತಪಟ್ಟಿರುವುದರಿಂದ ದುಃಖವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷ ನೆರವು ನೀಡಲಿದೆ. ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಈ ನಿಟ್ಟಿನಲ್ಲಿ ಮುಂದುರೆಯಬೇಕು ಎಂದು ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ರಾಜನಾಥ್ ಸಿಂಗ್ ಅವರು ಮೆಹಬೂಬ ಮುಫ್ತಿ ಅವರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದು, ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಕೇಂದ್ರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments are closed.