ಕರಾವಳಿ

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಆಯ್ಕೆ

Pinterest LinkedIn Tumblr

Vijayalakshmi_Shibarur_Vaddarse Award

ಉಡುಪಿ: ಬ್ರಹ್ಮಾವರ ವಲಯ ಕಾರ್‍ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಪತ್ರಿಕೋದ್ಯಮದ ಅಗ್ರಗಣ್ಯ ಸಾಧಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿಯವರ ಹೆಸರಿನಲ್ಲಿ ಈ ವರ್ಷದಿಂದ ಕೊಡಮಾಡುವ ಪ್ರತಿಷ್ಠಿತ ‘ವಡ್ಡರ್ಸೆ ರಘುರಾಮ ಶೆಟ್ಟಿ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ’ ಖ್ಯಾತ ಪತ್ರಕರ್ತೆ, ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ವಲಯ ಕಾರ್‍ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದ್ದಾರೆ.

ಜು.24 ರಂದು ಬೆಳಿಗ್ಗೆ 9.30ರಿಂದ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಂಪನ್ಮೂಲ ವ್ಯಕ್ತಿಗಳ ಮೂಲಕ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪತ್ರಿಕೋದ್ಯಮ ಕಾರ್‍ಯಾಗಾರ ಹಾಗೂ ಸಂಜೆ 4 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಾಡಿನ ಗಣ್ಯ ಚಿಂತಕರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Comments are closed.