ದೇಹದ ತೂಕವು ಹೆಚ್ಚಾಗಿರುದು ಬಹುತೇಕ ಜನರ ಸಾಮಾನ್ಯ ಸಮಸ್ಯೆಯಾಗಿದೆ. ಬೆಳಗಿನ ಉಪಾಹಾರವನ್ನು ತಪ್ಪಿಸಿಕೊಳ್ಳುವುದು, ಅನಾರೋಗ್ಯಕರ ಶೈಲಿಯ ಆಹಾರಸೇವನೆ, ತಡರಾತ್ರಿಯ ಉದ್ಯೋಗ, ಹಾಗೂ ಇನ್ನೂ ಅನೇಕ ಕಾರಣಗಳಿಂದಾಗಿ ನಮ್ಮ ದೇಹದ ತೂಕವನ್ನು ಹೆಚ್ಚಿಸುವಂತೆ ಮಾಡುತ್ತದೆ.
ಇವತ್ತು ಬೊಜ್ಜು ಹಲವರನ್ನು ಕಾಡುತ್ತದೆ. ಶರೀರದಲ್ಲಿ ಕೊಬ್ಬಿನ ಅಂಶ ಹೆಚ್ಚಾದಾಗ ಶರೀರದ ಗಾತ್ರ ಹಿಗ್ಗುತ್ತದೆ. ಇದೇ ಬೊಜ್ಜು. ಮನುಷ್ಯನಿಗೆ ಬೊಜ್ಜು ಹೆಚ್ಚಾಗುತ್ತಿದ್ದಂತೆಯೇ ರಕ್ತದೊತ್ತಡ, ಹೃದಯದ ಕಾಯಿಲೆ, ಪಿತ್ತಕೋಶದ ಕಾಯಿಲೆ, ಮೂಳೆ ಸವೆತ, ಕೀಲುಗಳ ಕಾಯಿಲೆ, ಉಸಿರಾಟದ ತೊಂದರೆ, ಸುಸ್ತು, ಆಯಾಸದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
Comments are closed.