
ಬೆಂಗಳೂರು, ಜು. ೧೮- ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್‌ನಲ್ಲಿಂದು ತಿಳಿಸಿದ್ದಾರೆ.
ಮೈಸೂರು ಮಾಜಿ ಜಿ.ಪಂ. ಅಧ್ಯಕ್ಷ ಮರಿಗೌಡ ಹಾಗೂ ಅವರ ಬೆಂಬಲಿಗರು, ತಮ್ಮನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಖಾ ಅವರು ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ದೂರನ್ನು ಆಧರಿಸಿ ಮೈಸೂರಿನ ನಜರಬಾದ್ ಪೊಲೀಸ್ ಠಾಣೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ ಎಂದು ತಿಳಿಸಿದರು.
ಅನುಪಮಾ ಶೆಣೈ ರಾಜೀನಾಮೆ
ವೈಯಕ್ತಿಕ ಕಾರಣಗಳಿಂದಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದೆ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕೂಡ್ಲುಗಿಯ ಡಿವೈಎಸ್ಪಿ ಕು. ಅನುಪಮಾ ಶೆಣೈ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಅವರನ್ನು ರಾಜೀನಾಮೆ ವಾಪಸು ಪಡೆಯುವಂತೆ ಪ್ರಯತ್ನಿಸಿದ ಪ್ರಯತ್ನಗಳು ಸಫಲವಾಗದೆ, ಅಂತಿಮವಾಗಿ ಸರ್ಕಾರ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸದನಕ್ಕೆ ತಿಳಿಸಿದರು.
ಅನುಪಮಾ ಶೆಣೈ ಅವರ ರಾಜೀನಾಮೆ ಅಂಗೀಕಾರದ ಬಗ್ಗೆ ಹಿಂಬರಹವನ್ನು ಪೊಲೀಸ್ ಪ್ರಧಾನ ಕಚೇರಿಯಿಂದ ರವಾನಿಸಲಾಗಿದೆ ಎಂದು ಹೇಳಿದರು.
ಅನುಪಮಾ ಶೆಣೈ ಅವರು ರಾಜೀನಾಮೆಗೆ ಕಾರಣ ವಿವರಿಸಿ ನೀಡಿದ ಎರಡನೇ ರಾಜೀನಾಮೆ ಪತ್ರ ಸರ್ಕಾರದಲ್ಲಿ ಅಂಗೀಕೃತವಾಗಿಲ್ಲ. ಈ ಪತ್ರವು ಪೊಲೀಸ್ ಅಧೀಕ್ಷಕರಿಗೆ ನೇರವಾಗಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮತ್ತೊಬ್ಬ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದರು.
ಈ ಸಂಬಂಧ ನಟರಾಜ್ ಎಂಬುವವರನ್ನು ಅಪಹರಣ ಪ್ರಕರಣ ಸಂಬಂಧ ನಟರಾಜ್ ಎಂಬುವವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ ಎಂದರು.
Comments are closed.