ಕರಾವಳಿ

ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಯಲ್ಲಿ ಭಜರಂಗದಳದವರ ಕೈವಾಡ : ಪರಮೇಶ್ವರ್

Pinterest LinkedIn Tumblr

paramesh

ಬೆಂಗಳೂರು:  ಚಿಕ್ಕಮಗಳೂರು ಡಿವೈಎಸ್‍ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಅಂಗಗಳಾದ ಸಂಘ ಪರಿವಾರದ, ಭಜರಂಗದಳದವರ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿವೈಎಸ್‍ಪಿ ಕಲ್ಲಪ್ಪ ಹಂಡಿಭಾಗ್ ಅವರನ್ನು ಸಿಕ್ಕಿಹಾಕಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದವರಲ್ಲಿ ಭಜರಂಗದಳದವರ ಕೈವಾಡವಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಇಬ್ಬರು ಭಜರಂಗದಳದ ಪ್ರಮುಖರನ್ನು ಬಂಧಿಸಲಾಗಿದೆ.

ತಲೆಮರೆಸಿಕೊಂಡಿರುವ ಪ್ರವೀಣ್ ಖಾಂಡ್ಯ ಸೇರಿದಂತೆ ಮತ್ತಿಬ್ಬರಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇವರ ಬಂಧನದ ನಂತರ ಸತ್ಯಾಂಶ ಹೊರಬರಲಿದೆ ಎಂದು ಪರಂ ತಿಳಿಸಿದರು. ಹಂಡಿಭಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಸತ್ಯಾಂಶ ಹೊರತರಲು ಸರ್ಕಾರ ಬದ್ಧವಾಗಿದೆ. ಆದರೆ, ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಡಿವೈಎಸ್‍ಪಿಯಾಗಿದ್ದ ಅನುಪಮಾ ಶೆಣೈ ಅವರ ಮೇಲೆ ಯಾವುದೇ ಒತ್ತಡವಿರಲಿಲ್ಲ. ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಆದರೂ ಬಿಜೆಪಿಯವರು ಇದನ್ನು ರಾಜಕೀಯ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ತಿಳಿಸಿದರು.

Comments are closed.