ಕರಾವಳಿ

ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ : ಪಿಕಪ್ ವಾಹನ ಸಹಿತಾ ಮೂವರು ಆರೋಪಿಗಳ ಬಂಧನ

Pinterest LinkedIn Tumblr

Illeagle-Cattle_Pikup

ಪುತ್ತೂರು, ಜು.21: ಬೆಳ್ತಂಗ‌ಡಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದನ್ನು ಪುತ್ತೂರು ತಾಲೂಕಿನ ಕಬಕ ಗ್ರಾಮದ ಗೇರು ಕಟ್ಟೆ ಸಮೀಪ ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅನಿಲ ಕುಮಾರ್, ಜಿಜೋ ಮತ್ತು ಸುಜಿತ್ ಕುಮಾರ್ ಎನ್ನಲಾಗಿದೆ.

ಬುಧವಾರ ರಾತ್ರಿಯ ವೇಳೆ ಬೆಳ್ತಂಗಡಿ ವೃತ್ತನಿರೀಕ್ಷಕ ನೇಮಿರಾಜ್ ಮತ್ತು ತಂಡ ವಾಹನ ತಪಾಸಣೆ ನಡೆಸುತ್ತಿದ್ದಾಗ ಪಿಕಪ್ ವಾಹನವೊಂದು ನಿಲ್ಲಿಸಲು ಸೂಚನೆ ನೀಡಿದರೂ, ನಿಲ್ಲಿಸದೆ ಹೋಗುತ್ತಿರುವುದನ್ನು ಗಮನಿಸಿ ಬೆನ್ನಟ್ಟಿದಾಗ ವಾಹನವನ್ನು ಬದಿಯಲ್ಲಿ ಬಿಟ್ಟು ಚಾಲಕ ಹಾಗೂ ವಾಹನದಲ್ಲಿದ್ದವರು ಪರಾರಿಯಾಗಿದ್ದಾರೆ.

ಗಸ್ತುನಿರತ ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಹತ್ತು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕೂಡಿ ಹಾಕಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ.ಅದರಲ್ಲಿ ಮೂರು ದನಗಳನ್ನು ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಪತ್ತೆಯಾಗಿದೆ.

ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಈ ಜಾನುವಾರುಗಳನ್ನು ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತೆಂಬ ಮಾಹಿತಿ ಹೊರಬಿದ್ದಿದೆ. ಜಾನುವಾರುಗಳು ಮತ್ತು ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂ‌ಡಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.