ಕರಾವಳಿ

ದ.ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ಜಿ.ಜಗದೀಶ್ ನೇಮಕ

Pinterest LinkedIn Tumblr

DC_JAGADISH_Charge

ಮಂಗಳೂರು,ಜುಲೈ 22 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ 2005ರ ಬ್ಯಾಚ್‌ನ ಐಎಎಸ್ ಆಫಿಸರ್ ಡಾ.ಕೆ.ಜಿ.ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ. 

ಈ ಹಿಂದೆ ಬೆಂಗಳೂರಿನ ರಾಜೀವ್ ಗಾಂಧಿ ರೂರಲ್ ಹೌಸಿಂಗ್ ಕಾರ್ಪೋರೇಶನ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ 38 ವರ್ಷದ ಡಾ.ಕೆ.ಜಿ.ಜಗದೀಶ್ ಅವರು ಅದಕ್ಕೂ ಮೊದಲು ಕಲ್ಬುರ್ಗಿ ಜಿಲ್ಲಾಧಿಕಾರಿಯಾಗಿ ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

2013ರ ಕೊನೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಧಿಕಾರ ಸ್ವೀಕರಿಸಿ, ಸುಮಾರು 2.7 ವರ್ಷಗಳ ಕಾಲ ದ.ಕ. ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ರಾಹೀಂ ಅವರನ್ನು ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ತಮ್ಮ ಅಧಿಕಾರ ಅವಧಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು.

Comments are closed.