ನವದೆಹಲಿ: ಸಾಂಪ್ರದಾಯಿಕ ವಿವಾದಿತ ಜಲ್ಲಿಕಟ್ಟು ಕ್ರೀಡೆ ಸುಮಾರು 5000 ವರ್ಷಗಳ ಇತಿಹಾಸ ಹೊಂದಿದೆ ಎಂಬ ಕಾರಣಕ್ಕೆ ಕಾನೂನು ಬಾಹಿರವಾಗಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.
ಜಲ್ಲಿಕಟ್ಟು ಕ್ರೀಡೆಗೆ 5000 ವರ್ಷಗಳ ಇತಿಹಾಸವಿದೆ. ಆದ್ದರಿಂದ ಅನುಮತಿ ನೀಡಬೇಕೆಂದು ಆಗ್ರಹಿಸುವುದು ಹಾಸ್ಯಾಸ್ಪದವಾಗಿದೆ. 1989ರಿಂದ ಇಲ್ಲಿಯವರೆಗೆ ಒಂದು ಸಾವಿರಕ್ಕೂ ಅಧಿಕ ಬಾಲ್ಯವಿವಾಹದ ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಂತ ಬಾಲ್ಯವಿವಾಹಕ್ಕೆ ಅನುಮತಿ ನೀಡಲು ಸಾಧ್ಯವೇ? ಎಂದು ಪ್ರಶ್ನಿಸಿತು.
ಈ ಕ್ರೀಡೆ ತುಂಬಾಳ ಹಳೆಯದ್ದು, ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂಬ ಕಾಣರಕ್ಕೆ ಮಣೆ ಹಾಕಲು ಸಾಧ್ಯವಿಲ್ಲ ಎಂದಿರುವ ಕೋರ್ಟ್, ಇದೊಂದು ಸಾಂವಿಧಾನಿಕ ಹಾಗೂ ಶಾಸನಬದ್ಧ ಸಮಸ್ಯೆಯಾಗಿದೆ. ಆದ್ದರಿಂದ ಕಾನೂನಿನ ಮಾನ್ಯತೆ ಪಡೆಯದ ಇಂತಹ ಸಾಂಪ್ರದಾಯಿಕ ಕ್ರೀಡೆಗಳಿಗೆ ಪರವಾನಿಗೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.
ಪ್ರತಿವರ್ಷ ಗೂಳಿಗಳನ್ನು ಹಿಡಿಯಲು ಹೋಗಿ ಹಲವರು ಮೃತಪಡುತ್ತಿದ್ದರು. ಗೂಳಿಗಳಿಗೂ ಹಿಂಸೆ ನೀಡಲಾಗುತ್ತಿತ್ತು. ಇದರ ವಿರುದ್ಧ ಪ್ರಾಣಿದಯಾ ಸಂಘ ಸುಪ್ರಿಂಕೊರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರಿಂ ಕೊರ್ಟ್2016ರ ಜ. 12ರಂದು ಜಲ್ಲಿಕಟ್ಟಿಗೆ ಸಂಪೂರ್ಣ ನಿಷೇಧ ಹೇರಿತ್ತು. ಆದರೆ ಭಾರಿ ಒತ್ತಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಲ ನಿಬಂಧನೆಗಳನ್ನು ವಿಧಿಸಿ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿತ್ತು. ಇದೀಗ ಪ್ರಕರಣವನ್ನು ಮರುಪರಿಶೀಲನೆ ನಡೆಸಿದ ನ್ಯಾಯಪೀಠ, ಅಂತಿಮ ತೀರ್ಪನ್ನು ಅಗಸ್ಟ್ 30ರಂದು ನೀಡುವುದಾಗಿ ಹೇಳಿದೆ.
Comments are closed.