ರಾಷ್ಟ್ರೀಯ

ಅಮಿತ್ ಷಾ ಗುಜರಾತ್ ಮುಖ್ಯಮಂತ್ರಿ ಆಗಲ್ಲ: ವೆಂಕಯ್ಯ ನಾಯ್ಡು

Pinterest LinkedIn Tumblr

amit_shahನವದೆಹಲಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಯಾರಾಗುತ್ತಿದ್ದಾರೆ? ಎಂಬ ಪ್ರಶ್ನೆಗೆ ಗುರುವಾರ ಉತ್ತರ ಸಿಗಲಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಶಾಸಕರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಗುಜರಾತ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ನಾಯ್ಡು ಸ್ಪಷ್ಟ ಪಡಿಸಿದ್ದಾರೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಯ್ಡು, ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ವ್ಯಕ್ತಿಯನ್ನು ನೇಮಕ ಮಾಡುವ ಬಗ್ಗೆ ನಾಳೆಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

Comments are closed.