ಕರಾವಳಿ

ಸೇನೆ ವಿರುದ್ಧ ಘೋಷಣೆ ಕೂಗಿದವರ ವಿರುದ್ಧ ಹಾಗೂ ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ

Pinterest LinkedIn Tumblr

ABVP_protest_photo_9

ಮಂಗಳೂರು, ಆ.17: ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬುಧವಾರ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮೊದಲಿಗೆ ನಗರದ ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ದ.ಕ.ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮರೆವಣಿಗೆ ಹಮ್ಮಿಕೊಂಡಿದ್ದರು.ಮೆರವಣಿಗೆಯಲ್ಲಿ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ABVP_protest_photo_1 ABVP_protest_photo_2 ABVP_protest_photo_3 ABVP_protest_photo_4 ABVP_protest_photo_8 ABVP_protest_photo_7 ABVP_protest_photo_5

ABVP_protest_photo_10

ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಸಭೆಯಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದವರನ್ನು ಬಂಧಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜು ಹಾಗೂ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆಯ ವಿರುದ್ಧವೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು,ದೇಶದ್ರೋಹಿ ಘಟನೆ ನಡೆದರೂ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಿಲ್ಲ. ಎಬಿವಿಪಿ ದೂರು ನೀಡಿದರು ಎರಡು ದಿನ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭ ನೂರಾರು ಎಬಿವಿಪಿ ಕಾರ್ಯಕರ್ತರು ದೇಶಪ್ರೇಮಕ್ಕೆ ಸಂಬಂಧಿಸಿದಂತೆ ವಿವಿಧ ಘೋಷಣೆಗಳನ್ನು ಕೂಗಿದರು. ರೈತರ ಹಾಗೂ ವಿದ್ಯಾರ್ಥಿಗಳ ವಿರುದ್ಧವಾಗಿರುವ ರಾಜ್ಯ ಸರ್ಕಾರ ನಾಚಿಕೆ ಇಲ್ಲದ ಸರ್ಕಾರ ಎಂದು ಎಬಿವಿಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಲೇವಾಡಿ ಮಾಡಿದರು. ಎಬಿವಿಪಿ ಕಾರ್ಯದರ್ಶಿ ನವೀನ್, ಎಬಿವಿಪಿ ಕಾರ್ಯಕರ್ತ ಕೀರ್ತನ್ ಮುಂತಾದವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ವಿರುದ್ಧ ಆಕ್ರೋಷ :

ತಮ್ಮ ಕಚೇರಿಯೆದುರೇ ಬೃಹತ್ ಸಂಖ್ಯೆಯ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯುತ್ತಿದ್ದರೂ, ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಲು ಆಗಮಿಸಲಿಲ್ಲ ಎಂದು ಪ್ರತಿಭಟನಕಾರರು ಆಕ್ರೋಷ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಡಾ.ಜಗದೀಶ್ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರ ಮನವಿ ಸ್ವೀಕರಿಸಿ, ಮನವಿಯನ್ನು ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದ ಮೇಲೆ ಪ್ರತಿಭಟನಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

Comments are closed.