ಕರ್ನಾಟಕ

ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ಸಿಐಡಿ ಬುಲಾವ್

Pinterest LinkedIn Tumblr

K-J-GEORGEಬೆಂಗಳೂರು, ಆ. ೧೯- ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಎ.ಎನ್.ಪ್ರಸಾದ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆಗಸ್ಟ್ 22ರಂದು ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಸೂಚಿಸಿದ್ದು, ಪ್ರಕರಣದ ಮಾಹಿತಿ ಪಡೆಯಲಿದ್ದಾರೆ.

ಆತ್ಮಹತ್ಯೆಗೆ ಮುನ್ನ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ, ಕೆ.ಜೆ. ಜಾರ್ಜ್ ಹಾಗೂ ಪ್ರಸಾದ್ ನನಗೆ ಕಿರುಕುಳ ನೀಡಿದ್ದರು. ನನಗೆ ಏನಾದ್ರೂ ಆದರೆ ಅದಕ್ಕೆ ಅವರೇ ಕಾರಣ ಎಂದು ನೇರ ಆರೋಪ ಮಾಡಿದ್ದರು.

Comments are closed.