ಕರಾವಳಿ

ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಕದ್ರಿ ಕ್ಷೇತ್ರಕ್ಕೆ ಭೇಟಿ

Pinterest LinkedIn Tumblr

rudrppa_kadri_visit

ಮಂಗಳೂರು: ಕರ್ನಾಟಕ ರಾಜ್ಯ ಸರಕಾರದ ಮುಜರಾಯಿ ಹಾಗೂ ಜವಳಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿಯವರು ಸಕುಟುಂಬಿತರಾಗಿ‌ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಳಕ್ಕೆ‌ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ, ಕ್ಷೇತ್ರದ ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯ, ಕರ್ನಾಟಕ ಜಾನಪದ ಪರಿಷತ್ ಕೇರಳ ಘಟಕದ‌ ಅಧ್ಯಕ್ಷ ಕೇಶವ ಪ್ರಸಾದ ನಾಣಿತ್ತಿಲು,ರಾಘವೇಂದ್ರ‌ ಅಡಿಗ, ಪ್ರಭಾಕರ‌ ಅಡಿಗ, ಅರುಣ್, ಮೊದಲಾದವರು ಉಪಸ್ಥಿತರಿದ್ದರು.

Comments are closed.